

ಹೈದರಾಬಾದ್ : ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳು ವಿಚಾರಣೆ ವೇಳೆ ಇದೇ ರೀತಿ 9 ಯುವತಿಯರ ಮೇಲೆ ಅತ್ಯಾಚಾರ ಎಸಗಿ ಸುಟ್ಟು ಹಾಕಿದ್ದಾಗಿ ತಪ್ಪೊಪ್ಪಿಕೊಂಡಿದ್ದರು ಎಂದು ತನಿಖಾಧಿಕಾರಿಗಲು ಹೇಳಿದ್ದಾರೆ.
ಪಶುವೈದ್ಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಾದ ಮೊಹಮ್ಮದ್ ಆರೀಫ್, ಜೊಲ್ಲು ನವೀನ, ಜೊಲ್ಲು ಶಿವ ಮತ್ತು ಚೆನ್ನಕೇಶವುಲು ನವೆಂಬರ್ 27 ರಂದು ಹೈದರಾಬಾದ್ ಹೊರವಲಯದಲ್ಲಿ ದಿಶಾ ಮೇಲೆ ಅತ್ಯಾಚಾರ ಎಸಗಿ ಹೈದರಾಬಾದ್-ಬೆಂಗಳೂರು ಹೆದ್ದಾರಿಯ ಸೇತುವೆಯೊಮದರ ಅಡಿ ಸುಟ್ಟುಹಾಕಿದ್ದರು.
ಪ್ರಕರಣ ಬೆನ್ನತ್ತಿದ್ದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಈ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದ ಸಂದರ್ಭದಲ್ಲಿ ತೆಲಂಗಾಣ-ಕರ್ನಾಟಕ ಗಡಿಯಲ್ಲಿಯೇ ಇದೇ ರೀತಿಯ 15 ಪ್ರಕರಣಗಳಲ್ಲಿ ಆರೋಪಿಗಳ ಕೈವಾಡವಿರುವ ತನಿಖೆ ನಡೆಸಿದ್ದರು. ಈ ವೇಳೆ ಆರೀಫ್ 9 ಯುವತಿಯರ ಮೇಲೆ ಅತ್ಯಾಚಾರ ಎಸಗಿ ನಂತರ ಸುಟ್ಟು ಹಾಕಿದ್ದೇವು ಎಂಬ ಸಂಗತಿಯನ್ನು ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.









