Saturday, May 9, 2026
ರಾಜಕೀಯ

ಇಂದು ಮಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ-ಕಹಳೆ ನ್ಯೂಸ್

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಗೋಲಿಬಾರ್ ಗೆ ಇಬ್ಬರು ಮೃತಪಟ್ಟಿದ್ದಾರೆ. ಈ ನಡುವೆ ಇಂದು ಮಂಗಳೂರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಸಿದ್ದರಾಮಯ್ಯ ಇಂದು ಮಧ್ಯಾಹ್ನ ಮಂಗಳೂರಿಗೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅಂಜಿಯೋಪ್ಲಾಸ್ಟಿ ಚಿಕಿತ್ಸೆ ಪಡೆದಿರುವ ಸಿದ್ದರಾಮಯ್ಯ, 15 ದಿನಗಳ ಕಾಲ ಕಡ್ಡಾಯವಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದರು.