Saturday, June 13, 2026
ಸುದ್ದಿ

ಕಾಂಗ್ರೆಸ್ ಹಿರಿಯ ನಾಯಕರಿಗೆ ಮತ್ತೆ ಸಿದ್ಧರಾಮಯ್ಯ ಬಿಗ್ ಶಾಕ್-ಕಹಳೆ ನ್ಯೂಸ್

ಕೆಪಿಸಿಸಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ನಾಯಕನ ಸ್ಥಾನ ಬದಲಾವಣೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ನಾಯಕರಿಗೆ ಮತ್ತೆ ನಿರಾಸೆ ಕಾದಿದೆ ಎನ್ನಲಾಗಿದೆ.

ಜಾಹೀರಾತು

ಉಪ ಚುನಾವಣೆ ಸೋಲಿನ ಬಳಿಕ ನೀಡಿದ್ದ ರಾಜೀನಾಮೆ ವಾಪಸ್ ಪಡೆಯಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರೆ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆಯಲು ಅವರು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡಿದ್ದರು. ಹೀಗಾಗಿ ಶಾಸಕಾಂಗ ಪಕ್ಷದ ನಾಯಕ, ವಿಪಕ್ಷ ನಾಯಕನ ಸ್ಥಾನಕ್ಕೆ ಬೇರೆಯವರನ್ನು ನೇಮಿಸುವಂತೆ ಮೂಲ ಕಾಂಗ್ರೆಸ್ಸಿಗರು ಒತ್ತಡ ಹೇರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸಭೆಯ ವಿರೋಧ ಪಕ್ಷದ ಸ್ಥಾನ ಹೆಚ್.ಕೆ. ಪಾಟೀಲ್ ಗೆ, ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಜಿ. ಪರಮೇಶ್ವರ್ ಗೆ ನೀಡಲು ಎಐಸಿಸಿ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹದ ವೇಳೆಯಲ್ಲಿ ಒತ್ತಡ ಹೇರಲಾಗಿದೆ.

ಮೂಲ ಕಾಂಗ್ರೆಸ್ ನಾಯಕರು ಹೀಗೆ ಒತ್ತಡ ಹೇರಿದ್ದರಾದರೂ, ಅದೇ ದಿನ ರಾತ್ರಿ ಶಾಸಕರ ಜೊತೆ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಎಐಸಿಸಿ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿದ ದಿನವೇ ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ಹಿಂಪಡೆಯುವೆ ಎಂದು ತಿಳಿಸಿದ್ದಾರೆನ್ನಲಾಗಿದೆ.

ಕಾಂಗ್ರೆಸ್ ಶಾಸಕರ ಸಭೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ವಾಪಸ್ ಪಡೆಯುವ ಬಗ್ಗೆ ತಿಳಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕೂಡ ಸಿದ್ಧರಾಮಯ್ಯ ಅವರನ್ನು ಬದಲಿಸದೇ ಸಾಮೂಹಿಕ ನಾಯಕತ್ವದಲ್ಲಿ ಕೆಪಿಸಿಸಿ ಹಾಗೂ ಶಾಸಕಾಂಗ ನಾಯಕನ ಸ್ಥಾನಕ್ಕೆ ನೇಮಕ ಮಾಡಲು ಚಿಂತನೆ ನಡೆಸಿದೆ. ಹೀಗಾಗಿ ಮೂಲ ಕಾಂಗ್ರೆಸ್ ನಾಯಕರಿಗೆ ಮತ್ತೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.