Rakshit And Rishab Shetty: ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ ಗೆಳೆಯ ರಿಷಭ್ ಶೆಟ್ಟಿಗೆ ಕುಚಿಕು ಸ್ಟೈಲ್ನಲ್ಲಿ ಶುಭ ಕೋರಿದ ರಕ್ಷಿತ್ ಶೆಟ್ಟಿ-ಕಹಳೆ ನ್ಯೂಸ್

ನಿನ್ನೆ ದೆಹಲಿಯ ವಿಜ್ಞಾನ ಭವನದಲ್ಲಿ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು, ಭಾರತೀಯ ಚಿತ್ರರಂಗದ ತಾರೆಗಳ ಸಮಾಗಮವಾಗಿತ್ತು. ಬಾಲಿವುಡ್, ಸ್ಯಾಂಡಲ್ವುಡ್, ಕಾಲಿವುಡ್ ಸೇರಿದಂತೆ ಇತರೆ ಭಾಷೆಗಳ ಸಿನಿ ರಂಗದವರು ಹಾಜರಿದ್ದರು.
2018ನೇ ಸಾಲಿನಲ್ಲಿ ತೆರೆಕಂಡ ಸಿನಿಮಾಗಳ ಪೈಕಿ ಒಟ್ಟು 11 ವಿಭಾಗದಲ್ಲಿ ಸ್ಯಾಂಡಲ್ವುಡ್ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಇದರಲ್ಲಿ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿಯನ್ನು ರಿಷಭ್ ಶೆಟ್ಟಿ ಅವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ತನ್ನದಾಗಿಸಿಕೊಂಡಿದೆ.











