
ನವದೆಹಲಿ : ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಗೆಲುವಿನೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಜಾರ್ಖಂಡ್ ರಾಜ್ಯವನ್ನು ಕಳೆದುಕೊಳ್ಳುವ ಮೂಲಕ ಬಿಜೆಪಿ ಕಳೆದ ಒಂದು ವರ್ಷದಲ್ಲಿ 5 ರಾಜ್ಯಗಳನ್ನು ಕಳೆದುಕೊಂಡಂತಾಗಿದೆ.
ಹೌದು, 2018 ರಲ್ಲಿ ನಡೆದ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿತ್ತು. ಬಳಿಕ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಇದೀಗ ಜಾರ್ಖಂಡ್ ನಲ್ಲೂ ಬಿಜೆಪಿ ಸೋಲು ಕಾಣುವ ಮೂಲಕ 1 ಒಂದು ವರ್ಷದಲ್ಲಿ 5 ರಾಜ್ಯಗಳನ್ನು ಕಳೆದುಕೊಂಡಿದೆ.











