
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಬೆಂಕಿ ಅವಘಢ ಹೆಚ್ಚುತ್ತಿದ್ದು, ಮತ್ತೊಂದೆಡೆ ಬೆಂಕಿ ಕಾಣಿಸಿಕೊಂಡಿದೆ. ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿಯಲು ಆರಂಭಿಸಿತು.
ಕೂಡಲೇ ಸ್ಥಳಕ್ಕೆ 22 ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಜನರು ಸಿಲುಕಿಕೊಂಡಿರುವ ಬಗ್ಗೆ ವರದಿಯಾಗಿಲ್ಲ.
ಎರಡು ಕಾರ್ಖಾನೆಗಳಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವರಿಗೆ ಗಾಯಗಳಾಗಿವೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಒಂದು ಕೈಗಾರಿಕೆಯಿಂದ ಬೆಂಕಿಯ ಜ್ವಾಲೆಯನ್ನು ಆರಿಸಿದ್ದಾರೆ. ಮತ್ತೊಂದು ಕಾರ್ಖಾನೆಯಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.ಇದು ಶೂ ಫ್ಯಾಕ್ಟರಿಯಾಗಿದೆ.











