Thursday, May 14, 2026
ಸುದ್ದಿ

Breaking : ‘ಪೌರತ್ವ ತಿದ್ದುಪಡಿ ಕಾಯ್ದೆ’ ವಿರೋಧಿಸಿ, ಎಡಪಕ್ಷಗಳಿಂದ ಜ.8ರಂದು ‘ಭಾರತ್ ಬಂದ್’ಗೆ ಕರೆ- ಕಹಳೆ ನ್ಯೂಸ್

ಬೆಂಗಳೂರು : ದೇಶಾಧ್ಯಂತ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಉತ್ತರ ಭಾರತವಂತೂ ಹೊತ್ತಿ ಉರಿಯುತ್ತಿದೆ. ಇದೀಗ ಇಂತಹ ಕಾಯ್ದೆಯನ್ನು ವಿರೋಧಿಸಿ, ಜನವರಿ 8, 2020ರ ಬುಧವಾರದಂದು ಭಾರತ್ ಬಂದ್ ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.

ಈ ಕುರಿತಂತೆ ಮಾಹಿತಿ ನೀಡಿರುವ ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ ರಾಜಾ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜನವರಿ 1ರಿಂದ 7ರ ವರೆಗೆ ಜನ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನೂ ಮುಂದುವರೆದು ಮಾತನಾಡಿದ ಅವರು, ಜನ ಜಾಗೃತಿ ಆಂದೋಲನ ಮುಗಿದ ನಂತ್ರ, ಜನವರಿ 8, 2020ರಂದು ದೇಶಾಧ್ಯಂತ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಅಂದು ವಿವಿಧ ಸಂಘಟನೆಗಳು ಭಾರತ್ ಬಂದ್ ಗೆ ಬೆಂಬಲ ನೀಡಿವೆ. ಹೀಗಾಗಿ ಪೌರತ್ವ ತಿದ್ದುಪಡಿ, ಎನ್ ಆರ್ ಸಿ ಮತ್ತು ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ, ಜನವರಿ 8ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ ಎಂಬುದಾಗಿ ತಿಳಿಸಿದರು.