Saturday, May 9, 2026
ಸುದ್ದಿ

ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್ ನಿಂದ ತಲಾ 5 ಲಕ್ಷ ರೂ ಪರಿಹಾರ-ಕಹಳೆ ನ್ಯೂಸ್

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ಇಂದು ಮಂಗಳೂರಿನಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಿಂದ ಪರಿಹಾರ ವಿತರಿಸಲಾಯಿತು.

ಮಂಗಳೂರಿಗೆ ಆಗಮಿಸಿದ ತೃಣಮೂಲ ಕಾಂಗ್ರೆಸ್ ನಿಯೋಗ ಮೃತರಿಬ್ಬರ ಕುಟುಂಬಗಳಿಗೆ ಪಕ್ಷದ ವತಿಯಿಂದ ತಲಾ 5 ಲಕ್ಷ ರೂ ಪರಿಹಾರವನ್ನು ವಿತರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕುದ್ರೋಳಿಯಲ್ಲಿರುವ ನೌಸೀನ್ ಮತ್ತು ಕಂದಕ್ ನಲ್ಲಿರುವ ಜಲೀಲ್ ಮನೆಗೆ ತೆರಳಿ ಕುಟುಂಬಿಕರಿಗೆ ಸಾಂತ್ವನ ವ್ಯಕ್ತಪಡಿಸಿ ತಲಾ 5 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದರು.

ಮಾಜಿ ಕೇಂದ್ರ ಸಚಿವ ದಿನೇಶ್ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯ ನದಿಮುಲ್ ಹಖ್ ಅವರು ಇಂದು ಮುಂಜಾನೆ ಮಂಗಳೂರಿಗೆ ಆಗಮಿಸಿ, ಮೃತರ ಮನೆಗೆ ಭೇಟಿ ನೀಡಿದರು.