
ಉಡುಪಿ ಪೇಜಾವರ ಮಠದ ಶ್ರೀಗಳಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪೇಜಾವರ ಶ್ರೀಗಳ ಶಿಷ್ಯೆ ಉಮಾಭಾರತಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಶ್ರೀಗಳ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿರುವ ಹಿನ್ನೆಲೆಯಲ್ಲಿ ತಮ್ಮ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಸಿಎಂ ಕೆಎಂಸಿ ಆಸ್ಪತ್ರೆಗೆ ಧಾವಿಸಿದ್ದಾರೆ. ಆಸ್ಪತ್ರೆಯಲ್ಲೇ ತಜ್ಞ ವೈದ್ಯರೊಂದಿಗೆ ಶ್ರೀಗಳ ಆರೋಗ್ಯದ ಕುರಿತಾಗಿ ಮಾಹಿತಿ ಪಡೆದುಕೊಂಡಿದ್ದಾರೆ.
ಪೇಜಾವರ ಶ್ರೀಗಳ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಕ್ಷಣಕ್ಷಣಕ್ಕೂ ಕ್ಷೀಣಿಸುತ್ತಿದೆ. ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರ ತಂಡದೊಂದಿಗೆ ಯಡಿಯೂರಪ್ಪ ಸಭೆ ನಡೆಸಿದ್ದು ಎಲ್ಲ ವೈದ್ಯರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ









