BREAKING NEWS:ಪೇಜಾವರ ಶ್ರೀಗಳ ಮೆದುಳು ನಿಷ್ಕ್ರಿಯ, ಆಸ್ಪತ್ರೆಯಲ್ಲಿ ವೈದ್ಯರೊಂದಿಗೆ ಸಿಎಂ ಚರ್ಚೆ–ಕಹಳೆ ನ್ಯೂಸ್

ಉಡುಪಿ : ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆ ಕಾಣುತ್ತಿದೆ ಎಂದು ಹೇಳಲಾಗಿತ್ತು. ಆದ್ರೇ ಇಂದು ಬೆಳಿಗ್ಗೆಯಿಂದಲೂ ಅವರ ಆರೋಗ್ಯ ಗಂಭೀರಗೊಂಡಿತ್ತು. ಇದೀಗ ಆಸ್ಪತ್ರೆಯ ವೈದ್ಯರ ಮೂಲಗಳ ಪ್ರಕಾರ ಶ್ರೀಗಳ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದ್ದು, ಕೆಎಂಸಿಯಲ್ಲಿ ದಾಖಲಾಗಿರುವ ಪೇಜಾವರ ಶ್ರೀಗಳ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಕೆಎಂಸಿ ಮೆಡಿಕಲ್ ಅಧೀಕ್ಷಕರು ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಿದ್ದಾರೆ.
ಕಳೆದ ಇತ್ತೀಚೆಗೆ ಅಷ್ಟ ಮಠಗಳಲ್ಲಿ ಒಂದಾದಂತ ಪೇಜಾವರದ ವಿಶ್ವೇಶ್ವರ ತೀರ್ಥ ಶ್ರೀಗಳು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ನ್ಯೂಮೋನಿಯ ಹಾಗೂ ಉಸಿರಾಟದ ತೊಂದರೆಯಿಂದ ದಾಖಲಾಗಿದ್ದರು. ಇಂತಹ ಪೇಜಾವರ ಶ್ರೀಗಳನ್ನು ತುರ್ತು ನಿಗಾಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಶ್ರೀಗಳ ಆರೋಗ್ಯ ಕುರಿತಂತೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಲೆಟೆಸ್ಟ್ ಹೆಲ್ತ್ ರಿಪೋರ್ಟ್ ಬಿಡುಗಡೆ ಮಾಡಿದ್ದು, ಶ್ರೀಗಳ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಗೊಂಡಿರುವುದಾಗಿ ತಿಳಿದು ಬಂದಿದೆ.
ಸದ್ಯ ಸಿಎಂ ಬಿಎಸ್ ಯಡಿಯ್ಯೂರಪ್ಪನವರು ಮಣಿಪಾಲ ಆಸ್ಪತ್ರೆಯ ಹಿರಿಯ ವೈದ್ಯರೊಂದಿಗೆ ಶ್ರೀಗಳ ಆರೋಗ್ಯದ ಬಗ್ಗೆ ಚರ್ಚೆ ನಡೆಸುತ್ತಿದ್ದು ಶ್ರೀಗಳ ಆರೋಗ್ಯ ಸಂಬಂಧ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಇದಲ್ಲದೇ ಪೇಜಾವರ ಕಿರಿಯ ಶ್ರೀಗಳಾದ ಶ್ರೀವಿಶ್ವ ಪ್ರಸನ್ನ ತೀರ್ಥ ಅವರೊಂದಿಗೆ ಕೂಡ ಸಿಎಂ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.









