Friday, May 15, 2026
ಸುದ್ದಿ

ಪೇಜಾವರ ಶ್ರೀಗಳ ಆರೋಗ್ಯ ಕ್ಷಣ ಕ್ಷಣವೂ ಕ್ಷೀಣ : ನಾಳೆ ಸಂಜೆಯವರೆಗೆ ಉಡುಪಿಯಲ್ಲೇ ಇರುವೆ – ಸಿಎಂ ಬಿಎಸ್ ವೈ–ಕಹಳೆ ನ್ಯೂಸ್

ಉಡುಪಿ : ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ. ವೈದ್ಯರು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಾವು ನಾಳೆ ಸಂಜೆಯವರೆಗೆ ಇಲ್ಲಿಯೇ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಶ್ರೀಗಳನ್ನು ಭೇಟಿ ಮಾಡಿ, ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಪೇಜಾವರ ಶ್ರೀಗಳ ಆರೋಗ್ಯ ಕ್ಷೀಣಿಸುತ್ತಿದೆ. ಅವರ ಆರೋಗ್ಯದ ಬಗ್ಗೆ ವೈದ್ಯಕೀಯ ನೆರವಿನ ಮೂಲಕ ಚೇತರಿಸಿಕೊಳ್ಳುವಂತೆ ಮಾಡುವ ಎಲ್ಲಾ ಪ್ರಯತ್ನವನ್ನು ವೈದ್ಯರು ಮಾಡುತ್ತಿರುವುದಾಗಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪೇಜಾವರ ಶ್ರೀಗಳ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣವಾಗುತ್ತಿರುವುದರಿಂದ, ತಾವು ನಾಳೆ ಸಂಜೆಯವರೆಗೆ ಇಲ್ಲಿಯೇ ಇರುವೆ. ಪೇಜಾವರ ಶ್ರೀಗಳ ಆರೋಗ್ಯದ ಬಗ್ಗೆ ವೈದ್ಯರು ನೀಡುತ್ತಿರುವ ಚಿಕಿತ್ಸೆ ಸೇರಿದಂತೆ ಎಲ್ಲಾ ವಿಚಾರಗಳನ್ನು ಇಲ್ಲಿಯೇ ಇದ್ದು ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ