
ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಯ ಆರೋಗ್ಯ ಕ್ಷೀಣಿಸಿರುವ ಹಿನ್ನೆಲೆ ಇಂದು ಬೆಳಗ್ಗೆ ಅವರನ್ನ ಮಠಕ್ಕೆ ಕರೆತರಲಾಗಿದ್ದು, ಅಲ್ಲೇ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಮಠದಲ್ಲಿ ಅಷ್ಠಮಠಾಧೀಶರಿಂದ ವಿಷ್ಣು ಸಹಸ್ರನಾಮ ಪಾರಾಯಣ ನಡೆಯುತ್ತಿದೆ.
ಶ್ರೀಗಳ ಪೂರ್ವಾಶ್ರಮದ ಸಂಬಂಧಿಕರು ಮಠದಲ್ಲಿದ್ದು, ಕಣ್ಣೀರು ಹಾಕುತ್ತಿದ್ದಾರೆ. ಮಠದ ಸುತ್ತಮುತ್ತಲಿನ ಅಂಗಡಿಗಳನ್ನ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದಾರೆ.
ಇಂದು ಬೆಳಗ್ಗೆ ಶಾಸಕ ರಾಮದಾಸ್ ಮಠಕ್ಕೆ ಭೇಟಿ ನೀಡಿದ್ದಾರೆ. ಶೀಘ್ರದಲ್ಲೇ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ಮಠಕ್ಕೆ ಆಗಮಿಸಲಿದ್ದಾರೆ. ಕೇವಲ ಗಣ್ಯರಿಗೆ ಮಾತ್ರ ಶ್ರೀಗಳ ಭೇಟಿಗೆ ಅವಕಾಶ ನೀಡಲಾಗಿದೆ. ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.









