
ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಹರಿಪಾದವನ್ನು ಸೇರಿದ ಶ್ರೀವಿಶ್ವೇಶತೀರ್ಥ ಶ್ರೀಪಾದಂಗಳವರಿಗೆ ನುಡಿ ನಮನ ಸಲ್ಲಿಸಲಾಯಿತು.
ಶ್ರೀರಾಮಕುಂಜೇಶ್ವರ ಸಂಸ್ಕೃತ ಪಾಠಶಾಲೆಯ ನಿವೃತ್ತ ಮುಖ್ಯಗುರುಗಳಾದ ಶ್ರೀ ನಾರಾಯಣ ಭಟ್ ನುಡಿನಮನ ಸಲ್ಲಿಸಿದರು .

ಶ್ರೀಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರುಗಳಾದ ಶ್ರೀಕೃಷ್ಣ ಶರ್ಮ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯಗುರುಗಳಾದ ಹಿರಿಯಣ್ಣ ಗೌಡ ಧನ್ಯವಾದವಿತ್ತರು.
ಅಧ್ಯಾಪಕರಾದ ಸತ್ಯ ಶಂಕರಭಟ್ ಕಾರ್ಯಕ್ರಮ ನಿರೂಪಿಸಿದರು .ಗಣೇಶ್ ಕಾಶಿಕಟ್ಟೆ ಉಪಸ್ಥಿತರಿದ್ದರು. ಕಾರ್ಯಕ್ರಮ ದ ಮೊದಲು ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.









