ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬದಲ್ಲಿ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನದ ಪ್ರಯುಕ್ತ “ವಿಶ್ವಮಾನವ ದಿನ ” ಆಚರಣೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ರಾಷ್ಟ್ರಕವಿ ಕುವೆಂಪು ರವರ ಜನ್ಮದಿನದ ಪ್ರಯುಕ್ತ “ವಿಶ್ವಮಾನವ ದಿನ ” ಆಚರಣೆಯನ್ನು ಮಾಡಲಾಯಿತು.
ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಕುವೆಂಪುರವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಕುವೆಂಪುರವರ ಸಾಧನೆಯ ಬಗ್ಗೆ ಮಾಹಿತಿ ನೀಡಿದರು.
ಶಿಕ್ಷಕಿ ಸಂಗೀತ ಶರ್ಮ ಹಾಗೂ ಅನುಷಾ ಸಮಾಜದ ಪರಿವರ್ತನೆಯಲ್ಲಿ ಕುವೆಂಪುರವರ ಕಾವ್ಯಗಳ ಮಹತ್ವದ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ,ಶಿಕ್ಷಕಿಯರು, ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.









