Saturday, May 9, 2026
ರಾಜಕೀಯ

ಏಸು ಪ್ರತಿಮೆ ನಿರ್ಮಾಣ ವಿವಾದ : ಸಚಿವರು, ಶಾಸಕರಿಗೆ ಖಡಕ್ ಸೂಚನೆ ನೀಡಿದ ಸಿಎಂ ಬಿಎಸ್ ವೈ-ಕಹಳೆ ನ್ಯೂಸ್

ಬೆಂಗಳೂರು : ಕನಕಪುರದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿಚಾರದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗುರಿಯಾಗಿಸಿಕೊಂಡು ಟೀಕೆ ಮಾಡುವುದು ಬೇಡ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ಸಚಿವರು ಶಾಸಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಏಸು ಕ್ರಿಸ್ತನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ಟೀಕೆ ಮಾಡುವುದು ಬೇಡ, ಇದರಿಂದಾಗಿ ಒಂದು ಧರ್ಮವನ್ನು ಸಂಪೂರ್ಣವಾಗಿ ಬಿಜೆಪಿಯಿಂದ ದೂರ ಮಾಡಿಕೊಂಡಂತಾಗಲಿದೆ. ಜೊತೆಗೆ ಇದರಿಂದ ಡಿ.ಕೆ.ಶಿವಕುಮಾರ್ ಗೆ ನೆರವಾಗುವ ಸಾಧ್ಯತೆ ಇದೆ. ಹೀಗಾಗಿ ಶಾಸಕರು, ಸಚಿವರು ಡಿಕೆಶಿ ವಿರುದ್ಧ ರಾಜಕೀಯ ಟೀಕೆ ಮಾಡದಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಡಿ.25 ರಂದು ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಕಶೀಲ ಏಸುಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ ಮಾಡಿದ್ದರು.