Saturday, May 9, 2026
ರಾಜಕೀಯ

ಬಿಗ್ ನ್ಯೂಸ್ : ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಸ್ಥಳ ಗುರುತಿಸಿದ ಯುಪಿ ಸರ್ಕಾರ -ಕಹಳೆ ನ್ಯೂಸ್

ಲಕ್ನೋ : ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಪ್ರಕಾರ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಐದು ಸ್ಥಳಗಳನ್ನು ಗುರುತಿಸಿದೆ.

ಮಸೀದಿ ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ ಮಿರ್ಜಾಪುರ, ಶಂಶುದ್ದೀನ್ ಪುರ್ ಮತ್ತು ಚಾಂದ್ ಪುರ್ ನಲ್ಲಿ ಐದು ಸ್ಥಳಗಳನ್ನು ಗುರುತಿಸಿದ್ದು, ಸುಪ್ರೀಂಕೋರ್ಟ್ ಆದೇಶದಂತೆ ಸುನ್ನಿ ವಕ್ಫ್ ಬೋರ್ಡ್ ಟ್ರಸ್ಟಿಗಳು ಈ ಸ್ಥಳವನ್ನು ಪರಿಶೀಲಿಸಿ ಮಸೀದಿ ನಿರ್ಮಾಣಕ್ಕೆ ಯಾವ ಸ್ಥಳ ಸೂಕ್ತ ಎಂಬುದನ್ನು ತಿಳಿಸಲಿ ಎಂದು ಯುಪಿ ಸರ್ಕಾರ ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಯೋಧ್ಯೆ-ಬಾಬ್ರಿ ಮಸೀದಿ ಕುರಿತು ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪನ್ನು ಮರುಪರಿಶೀಲಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ 18 ಅರ್ಜಿಗಳನ್ನು ಡಿಸೆಂಬರ್ 12 ರಂದು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು.