Thursday, May 14, 2026
ಸುದ್ದಿ

ಉಡುಪಿ ಎಸ್ಪಿ ನೀಶಾ ಜೇಮ್ಸ್ ವರ್ಗಾವಣೆ : ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ ಹಾಕೆ ಆಗಮನ – ಕಹಳೆ ನ್ಯೂಸ್

ಹೊಸ ವರ್ಷ ಆರಂಭವಾಗುತ್ತಿದ್ದಂತೆ ಹಿರಿಯ ಪೆÇಲೀಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ಉಡುಪಿ ಜಿಲ್ಲಾ ಪೆÇಲೀಸ್ಧಿ ಆಕಾರಿಯಾಗಿದ್ದ ನೀಶಾ ಜೇಮ್ಸ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
2018ರ ಫೆಬ್ರವರಿ 23 ರಂದು ಉಡುಪಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದ ನಿಶಾ, ಮಹಿಳೆಯರ ಸುರಕ್ಷತೆಗಾಗಿ ಜಿಲ್ಲೆಯಲ್ಲಿ ಅಬ್ಬಕ್ಕ ಪಡೆಯನ್ನು ರಚಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು


ಆದರೆ ಇದೀಗ ನೀಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾ ನೂತನ ಪೆÇಲೀಸ್ ವರಿμÁ್ಠಧಿಕಾರಿಯಾಗಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಉಪವಿಭಾಗದ ಸಹಾಯಕ ಪೆÇಲೀಸ್ ಅಧೀಕ್ಷಕರಾಗಿದ್ದ ಅಕ್ಷಯ್ ಮಚ್ಚೀಂದ್ರ ಹಾಕೆ ಅವರನ್ನು ಸರಕಾರ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
2015ರ ಬ್ಯಾಂಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಇವರಿಗೆ ಉಡುಪಿ ಜಿಲ್ಲಾ ಎಸ್ಪಿಯಾಗಿ ಭಡ್ತಿ ನೀಡಲಾಗಿದೆ.
ಅದೇ ರೀತಿ ಕಾರ್ಕಳ ಉಪ ವಿಭಾಗದ ಸಹಾಯಕ ಪೆÇಲೀಸ್ ಅಧೀಕ್ಷಕ ಪಿ. ಕೃಷ್ಣಕಾಂತ್ ಅವರನ್ನು ಬೆಂಗಳೂರು ಸಿಐಡಿ ಪೆÇಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗದ ಸಹಾಯಕ ಪೆÇಲೀಸ್ ಅಧೀಕ್ಷರಾಗಿದ್ದ ಜಿ.ಕೆ. ಮಿಥುನ್ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಕಾರ್ಕಳ ನಕ್ಸಲ್ ನಿಗ್ರಹ ಪಡೆಯ ಪೆÇಲೀಸ್ ಅಧೀಕ್ಷಕರಾಗಿ ನಿಯುಕ್ತಿಗೊಳಿಸಿ ಆದೇಶ ನೀಡಲಾಗಿದೆ.