Saturday, April 25, 2026
ಸುದ್ದಿ

ಪೊಲೀಸರ ಬಲೆಗೆ ಬಿದ್ದ ದಂತಚೋರರು: ಎರಡು ದಂತ ಸೇರಿ ಇಬ್ಬರ ವಶ-ಕಹಳೆ ನ್ಯೂಸ್

ಬೆಳ್ತಂಗಡಿ: ಖಚಿತ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ ಆನೆ ದಂತ ಸಾಗಿಸುತ್ತಿದ್ದ ಆರೋಪಿಗಳ ಸಹಿತ ಎರಡು ದಂತ ವಶ ಪಡಿಸಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಎಂಬಲ್ಲಿ ಕಾರ್ಯಚರಣೆ ನಡೆಸಿ, ಎರಡು ಅನೆ ದಂತ ಮತ್ತು ಆಮ್ನಿ ಕಾರಿನ ಜೊತೆಗೆ ಇಬ್ಬರು ಅರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮಡಿಕೇರಿಯ ಹೆರವನಾಡು ಗ್ರಾಮದ ಅಪ್ಪಂಗಳ ನಿವಾಸಿ ದಿನೇಶ ಪಿ.ಕೆ. ಹಾಗೂ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮ ಕುಂಬರಡಿ ನಿವಾಸಿ ಕುಮಾರ.ವಿ ಬಂಧಿತ ಆರೋಪಿಗಳು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರ ಸಂಜೆ ಖಚಿತ ಮಾಹಿತಿ ಮೇರೆಗೆ ಪುತ್ತೂರು ಅರಣ್ಯ ಸಂಚಾರಿ ದಳದ ಸಿಬಂದಿ ಸುಂದರ್ ಶೆಟ್ಟಿ, ವಿಜಯ ಸುವರ್ಣ, ಉದಯ, ರಾಧಕೃμÁ್ಣರವರು ದಾಳಿ ನಡೆಸಿ ಅಂದಾಜು ಮೌಲ್ಯ 30 ಲಕ್ಷ ರೂ. ಮೌಲ್ಯದ 2 ಆನೆದಂತಗಳೊಂದಿಗೆ ಅರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, ಪುದುವೆಟ್ಟು, ನೆರಿಯಾ, ದಿಡುಪೆ, ಚಾರ್ಮಾಡಿ ಪರಿಸರದಲ್ಲಿ ಆನೆಗಳ ಓಡಾಟ ಹೆಚ್ಚಿರುವ ನಡುವೆಯೇ ಆನೆದಂತ ಚೋರರ ಸೆರೆಯಾಗಿರುವುದಿರಿಂದ ಮತ್ತಷ್ಟು ಅನುಮಾನಕ್ಕೆ ಆಸ್ಪದ ನೀಡಿದೆ.

ಕಳೆದ ಸೆಪ್ಟೆಂಬರ್ 18 ರಂದು ಉಜಿರೆ ಸುರ್ಯ ಸಮೀಪ ಮನೆಯೊಂದರ ಶೆಡ್‍ನಲ್ಲಿ ಇರಿಸಲಾಗಿದ್ದ 51.730 ಕೆ.ಜಿ. ತೂಕದ 10 ಆನೆದಂತವನ್ನು ವಶಪಡಿಸಿ ಮೂವರು ಆರೋಪಿಗಳನ್ನು ಮಂಗಳೂರು ವಿಶೇಷ ಅರಣ್ಯ ಸಂಚಾರಿ ದಳ ಜೈಲಿಗಟ್ಟಿದ್ದರು. ಇದೀಗ ಮತ್ತೊಂದು ಪ್ರಕರಣ ದಾಖಲಾಗುತ್ತಲೇ ಈ ಅಕ್ರಮ ಜಾಲ ಎಲ್ಲೆಡೆ ವಿಸ್ತರಿಸಿರುವುದರ ಬಗ್ಗೆ ಇಲಾಖೆ ಮತ್ತಷ್ಟು ತನಿಖೆ ನಡೆಸುತ್ತಿದೆ. ಆರೋಪಿಗಳನ್ನು ನ್ಯಾಯಲಕ್ಕೆ ಹಾಜರುಪಡಿಸಲಾಗಿದೆ.