ಮುಜರಾಯಿ ಇಲಾಖೆಯ ವತಿಯಿಂದ ಉಚಿತ ಸಾಮೂಹಿಕ ವಿವಾಹ- ಮುಖ್ಯಮಂತ್ರಿಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಸಪ್ತಪದಿ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದ ಬಡ ಜನರಿಗೆ ನಡೆಯುವ ಉಚಿತ ವಿವಾಹದ ಯೋಜನೆ ಇದಾಗಿದೆ. ಈ ಆಮಂತ್ರಣ ಪತ್ರಿಕೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದರು.
ಮಾನ್ಯ ಮುಜರಾಯಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಈ ಯೋಜನೆ ಜಾರಿಗೆ ತಂದಿದ್ದು ಇದರ ಸಂಪೂರ್ಣ ಮುತುವರ್ಜಿಯನ್ನು ಸಚಿವರು ವಹಿಸಲಿದ್ದಾರೆ. ಸಭೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪುಂಜ, ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ಪರಿಷತ್ ಸದಸ್ಯ ಆನಂದ ಗುರೂಜಿ, ವಿವಿಧ ಶಾಸಕರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ಏಪ್ರಿಲ್ 26 ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ವಿವಿಧ ಎ ದರ್ಜೆಯ ದೇವಾಲಯಗಳಲ್ಲಿ ಉಚಿತ ಸಾಮೂಹಿಕ ಮದುವೆ ನಡೆಯಲಿದೆ. ತಾಳಿ ಸಹಿತ ಚಿನ್ನಗಳು ಮತ್ತು ವಧುವಿಗೆ ಹತ್ತು ಸಾವಿರ ಹಾಗೂ ವರನಿಗೆ ಐದು ಸಾವಿರ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸರ್ಕಾರದ ವತಿಯಿಂದಲೇ ನೀಡಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದರು.









