ಜ.18 ರಂದು ಮಹಾವೀರ ನಗರ, ಮಾಂಟ್ರಾಡಿಯಲ್ಲಿ ನಡೆಯಲಿರುವ ನೆಲ್ಲಿಕಾರು ಗ್ರಾ.ಪಂನ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಕಾರ್ಯಕ್ರಮ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಮಂಗಳೂರು ಹಾಗೂ ನೆಲ್ಲಿಕಾರು ಗ್ರಾಮ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ನೆಲ್ಲಿಕಾರು ಗ್ರಾಮ ಪಂಚಾಯತ್‍ನ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆಗಳು ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಜ.18 ರಂದು ಮಹಾವೀರ ನಗರ, ಹೊಂಪೆಟ್ಟು, ಮಾಂಟ್ರಾಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶಾಸಕರಾದ ಉಮಾನಾಥ್ ಕೋಟ್ಯಾನ್ ನೆಲ್ಲಿಕಾರು ಗ್ರಾಮ ಪಂಚಾಯತ್ನಲ್ಲಿ ಬಿಡುಗಡೆಗೊಳಿಸಿದರು. ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡವನ್ನು ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಿನಿ ಸಭಾಂಗಣವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಜ್ಯೋತಿ ನಗರ ಅಂಗನವಾಡಿ ಕೇಂದ್ರ ಕಟ್ಟಡವನ್ನು ಕೆ.ಪ್ರತಾಪ ಚಂದ್ರ ಶೆಟ್ಟಿ, ಗ್ರಾಮ ಕರಣಿಕರ ಕಛೇರಿ ಹಾಗೂ ಕಟ್ಟಡವನ್ನು ಶಾಸಕರಾದ ಉಮಾನಾಥ ಎ.ಕೋಟ್ಯಾನ್, ಗ್ರಾಮ ಪಂಚಾಯತ್ ಗ್ರಂಥಾಲಯವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷರಾದ ಮೀನಾಕ್ಷಿ ಶಾಂತಿಗೋಡು, ಅಮೃತ ಶಿಲೆ ನಾಮ ಫಲಕವನ್ನು ಮಂಗಳೂರು ತಾಲೂಕು ಪಂಚಾಯತ್‍ನ ಅಧ್ಯಕ್ಷರಾದ ಮಹಮ್ಮದ್ ಮೋನು ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಜಿಲ್ಲಾ ಪಂಚಾಯತ್ ಸದಸ್ಯರಾದ ಸುಜಾತ ಕೆ.ಪಿ ಉದ್ಘಾಟಿಸಲಿದ್ದಾರೆ. ಇನ್ನೂ ಕಾರ್ಯಕ್ರಮದ ಅಧುಕ್ಷತೆಯನ್ನು ಮೂಡಬಿದರೆಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮಾನಾಥ ಏ ಕೋಟ್ಯಾನ್ ವಹಿಸಲಿದ್ದಾರೆ. ಇನ್ನೂ ಈ ವೇಳೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಗ್ರಾಮಸ್ಥರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.









