Monday, April 27, 2026
ಸುದ್ದಿ

ದ.ಕ. ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕ-ಕಹಳೆ ನ್ಯೂಸ್

ಮಂಗಳೂರು, ಜ.12: ದ.ಕ. ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸುದರ್ಶನ್‌ಮೂಡುಬಿದಿರೆ ಚುನಾಯಿತರಾಗಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ

ಮಂಗಳೂರು, ಜ.12: ದ.ಕ. ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸುದರ್ಶನ್‌ಮೂಡುಬಿದಿರೆ ಚುನಾಯಿತರಾಗಿದ್ದಾರೆ.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ರವಿವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸುದರ್ಶನ್ ಈ ಹಿಂದೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಬಿಜೆಪಿ ಹಾಲಿ ಜಿಲ್ಲಾಧ್ಯಕ್ಷರಾಗಿದ್ದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ಅವಧಿಯು 2019 ಸೆಪ್ಟಂಬರ್ ತಿಂಗಳಲ್ಲಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಇಂದು ಚುನಾವಣೆ ನಿಗದಿಯಾಗಿತ್ತು. ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುವರ್ಣ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸಿದರು.

ಪಕ್ಷದ ನೂತನ ಜಿಲ್ಲಾಧ್ಯಕ್ಷ ಸುದರ್ಶನ್‌ರನ್ನು ಅಭಿನಂದಿಸಿರುವ ಶಾಸಕ ವೇದವ್ಯಾಸ ಕಾಮತ್, ನಿಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಹಾರೈಸಿದ್ದಾರೆ.