Monday, April 27, 2026
ಸುದ್ದಿ

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ಬಂಧನ-ಕಹಳೆ ನ್ಯೂಸ್

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮೊಹಮ್ಮದ್ ರಜಾಕ್ (17) ಬಂಧಿತ ವ್ಯಕ್ತಿ. ಅವಹೇಳನಕಾರಿ ಪೋಸ್ಟ್ ವಿರುದ್ಧ ಹಿಂದೂ ಜಾಗರಣ ವೇದಿಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲಿಸರ ರಜಾಕ್ ನನ್ನು ಬಂಧನಕ್ಕೊಳಪಡಿಸಿದ್ದಾರೆ.

ವಾಟ್ಸ್ ಆಯಪ್ ನಲ್ಲಿ ಮೋದಿ ವಿರುದ್ಧ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ವಶಕ್ಕೆ ನೀಡಿದ್ದಾರೆ. ಟಿಪ್ಪುಸುಲ್ತಾನ್ ಬಾಯ್ಸ್ ಎಂಬ ಗ್ರೂಪ್ ರಚಿಸಿದ್ದ ರಜಾಕ್, ಈ ಗ್ರೂಪ್ ಮೂಲಕ ಪಾಕಿಸ್ತಾನದ ಧ್ವಜ ವನ್ನು ಹಾಕಿದ್ದ. ಅಲ್ಲದೆ, ಗ್ರೂಪ್ ಮೂಲಕ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಗಳನ್ನು ಹಾಕುತ್ತಿಲ್ಲ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಬಸವನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.