Tuesday, April 28, 2026
ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವಿಟ್ಲ ಇದರ ಜ್ಞಾನಗಂಗಾ, ಶ್ರೀ ಲಕ್ಷ್ಮಿ ಸನ್ನಿಧಿ ,ಜಾನ್ಸಿರಾಣಿ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವಿಟ್ಲ ಇದರ ಜ್ಞಾನಗಂಗಾ, ಶ್ರೀ ಲಕ್ಷ್ಮಿ ಸನ್ನಿಧಿ ,ಜಾನ್ಸಿರಾಣಿ ಜ್ಞಾನವಿಕಾಸ ಕೇಂದ್ರಗಳ ವಾರ್ಷಿಕೋತ್ಸವ ಕಾರ್ಯಕ್ರಮವು -ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಜರಗಿತು.
ಕಾರ್ಯಕ್ರಮವನ್ನು ವಿಟ್ಲ ತಾಲೂಕು ಯೋಜನಾಧಿಕಾರಿ ಶ್ರೀಯುತ ಮೋಹನ್ ಕೆ ದೀಪ ಬೆಳಗಿಸಿ ಉದ್ಘಾಟಿಸಿ ಜ್ಞಾನ ವಿಕಾಸ ಕೇಂದ್ರ ಉದ್ದೇಶ ಹಾಗೂ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಡ್ಕ ವಲಯ ಅಧ್ಯಕ್ಷರಾದ ಶ್ರೀಯುತ ಈಶ್ವರ ನಾಯಕ್ ವಹಿಸಿದ್ದರು .
ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಾದ ಶ್ರೀಮತಿ ಸರಸ್ವತಿ ಬಿ ಮನೆ ಮತ್ತು ಮಹಿಳೆ ,ಮಹಿಳೆ ಮತ್ತು ಆರೋಗ್ಯ, ಮಹಿಳೆ ಮತ್ತು ಸಂಸ್ಕೃತಿ ,ಈ ವಿಷಯಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವೇದಿಕೆಯಲ್ಲಿ ಮಜಿ ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರು ಶ್ರೀ ಮಾತಾ ಡೆವಲಪರ್ಸ್ ಸುರತ್ಕಲ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀಯುತ ಸಂತೋಷ್ ಕುಮಾರ್ ಶೆಟ್ಟಿ, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಶ್ರೀಮತಿ ದಮಯಂತಿ ,ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಮತಿ ಪ್ರೇಮಲತಾ, ವೀರಕಂಭ ಒಕ್ಕೂಟ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ, ಜನಜಾಗೃತಿ ವೇದಿಕೆಯ ಸದಸ್ಯ ವೀರಪ್ಪ ಮೂಲ್ಯ, ಮಜಿ ಶಾಲಾ ಮುಖ್ಯಶಿಕ್ಷಕ ಶ್ರೀಯುತ ನಾರಾಯಣ ಪೂಜಾರಿ ಎಸ್ ಕೆ ,ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶ್ರೀಮತಿ ಪ್ರೇಮ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ರೇವತಿ, ಶ್ರೀಮತಿ ಜಯಲಕ್ಷ್ಮಿ, ಉಪಸ್ಥಿತರಿದ್ದರು .

ಜಾನ್ಸಿರಾಣಿ ಕೇಂದ್ರದ ಸದಸ್ಯ ಸುಚಿತ್ರ ಸ್ವಾಗತಿಸಿ, ಸೇವಾಪ್ರತಿನಿಧಿ ಎವ್ಲಿನ್ ವಂದಿಸಿದರು. ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಶ್ರೀಮತಿ ನಳಿನಾಕ್ಷಿ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು .ಬಳಿಕ ಜ್ಞಾನವಿಕಾಸ ಕೇಂದ್ರದ ಸದಸ್ಯರುಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು