Tuesday, April 28, 2026
ಸುದ್ದಿ

ಒಡಿಶಾದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್​ಪ್ರೆಸ್​​ ರೈಲು ಅಪಘಾತ: 40 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ- ಕಹಳೆ ನ್ಯೂಸ್

ಮುಂಬೈ-ಭುವನೇಶ್ವರ ಲೋಕಮಾನ್ಯ ತಿಲಕ್​ ಟರ್ಮಿನಸ್​ ಎಕ್ಸ್​ಪ್ರೆಸ್​​ ರೈಲು ಅಪಘಾತವಾಗಿ ಎಂಟು ಬೋಗಿಗಳು ಹಳಿ ತಪ್ಪಿದ್ದು, ಘಟನೆಯಲ್ಲಿ 40 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಒಡಿಶಾದಲ್ಲಿ ಲೋಕಮಾನ್ಯ ತಿಲಕ್ ಎಕ್ಸ್​ಪ್ರೆಸ್​​ ರೈಲು ಅಪಘಾತ: 40 ಮಂದಿಗೆ ಗಾಯ, ಹಲವರ ಸ್ಥಿತಿ…
ಒಡಿಶಾ: ಮುಂಬೈ-ಭುವನೇಶ್ವರ ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿ ಸುಮಾರು 40 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ಒಡಿಶಾದಲ್ಲಿ ನಡೆದಿದೆ.
ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ಒಡಿಶಾದ ಕಟಕ್ ಸಮೀಪದ ನೆರ್ಗುಂಡಿ ರೈಲ್ವೆ ನಿಲ್ದಾಣದ ಸಮೀಪ ಈ ದುರ್ಘಟನೆ ನಡೆದಿದ್ದು, ಗಾಯಗೊಂಡವರಲ್ಲಿ ಆರು ಮಂದಿ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ತಿಳಿಸಿದೆ.

ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು ಸಲಗಾಂವ್ ಮತ್ತು ನೆರ್ಗುಂಡಿ ನಡುವೆ ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ದುರಂತ ನಡೆದಿದ್ದು, ಎಂಟು ಬೋಗಿಗಳು ಹಳಿ ತಪ್ಪಿದೆ ಎಂದು ತಿಳಿದುಬಂದಿದೆ.

ಮುಂಜಾನೆ ತೀವ್ರ ಮಂಜು ಕವಿದಿದ್ದರಿಂದ ಈ ದುರ್ಘಟನೆ ನಡೆದಿದ್ದು, ಗಾಯಗೊಂಡಿರುವವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.