Thursday, May 14, 2026
ಸುದ್ದಿ

ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಶಿಕ್ಷಕನಿಗೆ 20 ವರ್ಷ ಕಠಿಣ ಸಜೆ – ಕಹಳೆ ನ್ಯೂಸ್

ಕಾಸರಗೋಡು : ನಾಲ್ಕನೇ ತರಗತಿಯ 9 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿಕ್ಷಕನಿಗೆ ಕಾರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಸಜೆ ವಿಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿ ಶಿಕ್ಷಕ ಕನಾರೂರು ಗ್ರಾಮದ ಪೆರಿಯಾಲಿ ಹೌಸ್‌ನ ರಾಜನ್‌.ಪಿ.ನಾಯರ್‌ ಯಾನೆ ರಾಜನ್‌ ಮಾಸ್ತರ್‌ 2018ರ ಅಕ್ಟೋಬರ್‌ ತಿಂಗಳಲ್ಲಿ ಸರಕಾರಿ ಶಾಲೆಯ ವಿದ್ಯಾರ್ಥಿನಿಗೆ ಐ.ಟಿ.ಸ್ಮಾರ್ಟ್ ಕೊಠಡಿಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾಗಿ ರಾಜಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆರೋಪಿ ದೋಷಿ ಎಂದು ಸಾಬೀತುಪಡಿಸಿದ ನ್ಯಾಯಾಲಯ ಆತನಿಗೆ 20 ವರ್ಷ ಕಠಿಣ ಸಜೆ, 25 ಸಾವಿರ ರೂಪಾಯಿ ದಂಡ, ದಂಡ ಪಾವತಿಸದಿದ್ದಲ್ಲಿ 2 ವರ್ಷ ಹೆಚ್ಚುವರಿ ಸಜೆ ವಿಧಿಸಿ ತೀರ್ಪು ನೀಡಿದೆ. ಹಾಗೆಯೇ ಲೈಂಗಿಕ ಕಿರುಕುಳಕೊಳ್ಳಗಾದ ವಿದ್ಯಾರ್ಥಿನಿಗೆ ಸರಕಾರ 10 ಲಕ್ಷ ರೂಪಾಯಿ ನೀಡಬೇಕೆಂದು ತೀರ್ಪಿನಲ್ಲಿ ಆದೇಶಿಸಲಾಗಿದೆ.