Monday, September 7, 2026
ಸುದ್ದಿ

ಫೆ.24 -ಮಾ.2: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ; ಪೂರ್ವಸಿದ್ಧತಾ ಸಭೆಯಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಭಾಗಿ – ಬ್ರಹ್ಮಕಲಶೋತ್ಸವಕ್ಕೆ ಡಾ‌.ಹೆಗ್ಗಡೆ, ಬಿ.ಎಸ್.ವೈ – ಕಹಳೆ ನ್ಯೂಸ್

ಪುತ್ತೂರು: ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್‌ನಲ್ಲಿ ನೂತನ ಕೊಡಿಮರ ಪ್ರತಿಷ್ಠೆ, ಆದಿ ದೈವ ಧೂಮಾವತಿ ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಮಹಾಮಾತೆ ದೇಯಿ ಬೈದೈತಿ ಸತ್ಯ ಧರ್ಮ ಚಾವಡಿ, ಗೆಜ್ಜೆಗಿರಿ ಕೋಟಿ ಚೆನ್ನಯ ಮೂಲಸ್ಥಾನ ಗರಡಿ ಪ್ರತಿಷ್ಠೆ ಹಾಗೂ ಗೆಜ್ಜೆಗಿರಿ ಮೂಲಸ್ಥಾನ ಗರಡಿ ನೇಮೋತ್ಸವವು ಫೆ.೨೪ರಿಂದ ಮಾ. ೨ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಣೆಯಿಂದ ಜರಗಲಿದೆ ಎಂದು ರಾಜ್ಯ ಮುಜರಾಯಿ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವರು, ಶ್ರೀ ಕ್ಷೇತ್ರ ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಾಹೀರಾತು

ಫೆ.೧೫ರಂದು ಕ್ಷೇತ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಫೆ.೨೬, ೨೮ ಮತ್ತು ೨೯ರಂದು ಧಾರ್ಮಿಕ ಸಭೆ ನಡೆಯಲಿದ್ದು, ಫೆ.೨೯ರಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ| ವೀರೇಂದ್ರ ಹೆಗ್ಗಡೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಭಾಗವಹಿಸಲಿದ್ದಾರೆ. ಅಲ್ಲದೆ ಮೂರು ದಿನದ ಸಭೆಯಲ್ಲಿ ಜಿಲ್ಲೆಯ ವಿವಿಧ ಮಠಗಳ ಮಠಾಧೀಶರು ಆಶೀರ್ವಚನ ನೀಡಲಿದ್ದಾರೆ. ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿದೆ ಎಂದು ಅವರು ತಿಳಿಸಿದರು. ಪ್ರತಿಕಾಗೋಷ್ಠಿಯಲ್ಲಿ ಶಾಸಕ ಸಂಜೀವ ಮಠಂದೂರು, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ.ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಜಿ.ಪಂ.ಸದಸ್ಯೆ ಶಯನಾ ಜಯಾನಂದ, ಕ್ಷೇತ್ರಾಡಳಿ ಸಮಿತಿ ಅಧ್ಯಕ್ಷ ಜಯಂತ ನಡುಬೈಲ್, ಕ್ಷೇತ್ರದ ಯಜಮಾನ ಶ್ರೀಧರ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪೀತಾಂಬರ ಹೇರಾಜೆ, ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್, ಸಹಾಯಕ ಕಮೀಷನರ್, ತಾ.ಪಂ.ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಸಹಾಯಕ ಕಮೀಷನರ್ ಯತೀಶ್ ಉಳ್ಳಾಲ್, ತಹಶೀಲ್ದಾರ್ ರಾಹುಲ್, ಕ್ಷೇತ್ರದ ತಂತ್ರಿ ಲೋಕೇಶ್ ಶಾಂತಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು