Recent Posts

Sunday, September 13, 2026
ಸುದ್ದಿ

ಅನ್ಯರ ಅನುಭವದಿಂದ ಪಾಠ ಕಲಿಯಬೇಕು: ಡಾ.ಪಾದೆಕಲ್ಲು ವಿಷ್ಣು ಭಟ್-ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣ ಎನ್ನುವಂತಹದ್ದು ಕೇವಲ ಕಾಲೇಜಿನಲ್ಲಿ ಪಡೆಯುವಂತಹದ್ದಲ್ಲ. ಎಲ್ಲೆಲ್ಲಿ ಅನುಭವ ದೊರೆಯುತ್ತದೆಯೇ ಅಲ್ಲಿ ಪಡೆದುಕೊಳ್ಳಬೇಕು. ಪ್ರತಿಯೊಬ್ಬರು ಒಳ್ಳೆಯ ವಿಷಯಗಳನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಅನುಭವ ಯಾರಲ್ಲಿದೆಯೋ ಅಲ್ಲಿಗೆ ತೆರಳಿ ಪಡೆಯುವ ಗುಣ ಬೆಳೆಸಿಕೊಂಡಾಗ ವ್ಯಕ್ತಿತ್ವ ಅರಳುವುದಕ್ಕೆ ಸಾಧ್ಯ ಎಂದು ಉಡುಪಿಯ ವಿಶ್ರಾಂತ ಪ್ರಾಚಾರ್ಯ ಡಾ. ಪಾದೆಕಲ್ಲು ವಿಷ್ಣು ಭಟ್ಟ ಅವರು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ವಿಶ್ರಾಂತ ಪ್ರಾಚಾರ್ಯರಾದ ಪ್ರೊ. ಬಿ. ಜನಾರ್ದನ ಭಟ್, ಪ್ರೊ. ಕೆ.ಆರ್. ರವಿರಾವ್, ಪ್ರೊ. ಎ.ವಿ. ನಾರಾಯಣ ಅವರನ್ನು ಶಾಲು, ಸ್ಮರಣಿಕೆ, ಸನ್ಮಾನ ಪತ್ರದೊಂದಿಗೆ ಗೌರವಿಸಲಾಯಿತು. ಹಿರಿಯ ವಿದ್ಯಾರ್ಥಿಗಳಾದ ಕನ್ಯಾನ ಭಾರತ ಸೇವಾಶ್ರಮದ ಎಸ್. ಈಶ್ವರ ಭಟ್ಟ, ಯಕ್ಷಗಾನ ಭಾಗವತೆ ಕಾವ್ಯಶ್ರೀ ಅಜೇರು ಅವರಿಗೆ ಗೌರವಾರ್ಪಣೆ ನಡೆಯಿತು. ಜೊತೆಗೆ ರ್ಯಾಂಕ್ ಪಡೆದ ವಿದ್ಯಾಥಿಗಳಿಗೆ ಸನ್ಮಾನ ಮಾಡಲಾಯಿತು.

ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ. ತಾಳ್ತಜೆ ವಸಂತ ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಂಘದ ಕಾರ್ಯಾಧ್ಯಕ್ಷ ಪ್ರೊ. ವಿಷ್ಣು ಗಣಪತಿ ಭಟ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪಿ. ಶ್ರೀನಿವಾಸ ಪೈ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಜನಾರ್ದನ ಭಟ್ ಎಸ್. ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ರಶ್ಮಿ ಮತ್ತು ತಂಡದವರು ಪ್ರಾರ್ಥಿಸಿ ಇಲೆಕ್ಟ್ರಾನಿಕ್ಸ್ ವಿಭಾಗದ ಉಪನ್ಯಾಸಕಿ ಸುಪ್ರಭ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಡಾ. ಮನಮೋಹನ ಕೆ. ಸನ್ಮಾತ ಪತ್ರ ವಾಚಿಸಿ, ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸರಸ್ವತಿ ಸಿ.ಕೆ. ವಾರ್ಷಿಕ ವರದಿ ವಾಚಿಸಿದರು. ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಸೌಮಿತ್ರ ವಂದನೆಗೈದರು ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ದೀಕ್ಷಿತ್ ಕಾರ್ಯಕ್ರಮ ನಿರೂಪಿಸಿದರು