Recent Posts

Sunday, September 13, 2026
ಸುದ್ದಿ

Breaking News : ಉಪ್ಪಿನಂಗಡಿಯಲ್ಲಿ ಭೀಕರ ರಸ್ತೆ ಅಪಘಾತ ; ಕಡಬ ಮೂಲದ ಯುವಕ‌ ಮೃತ್ಯು – ಕಹಳೆ ನ್ಯೂಸ್

ಉಪ್ಪಿನಂಗಡಿ : ನಗರದ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಬಳಿಯಲ್ಲಿ ಇಂದು ರಾತ್ರಿ 8.15 ರ ಸುಮಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಹಾಗೂ ಸ್ವಿಫ್ಟ್ ಕಾರು ಮುಖಾಮುಖಿ ಢಿಕ್ಕಿ ಸಂಭವಿಸಿದ ಕಾರಣ ಕಾರು ಚಾಲಕ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಡಬದಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿತ್ತು ಎನ್ನಲಾದ ಸ್ವಿಪ್ಟ್ ಕಾರು ಹಾಗೂ ಉಪ್ಪಿನಂಗಡಿಯಿಂದ ಕಡಬಕ್ಕೆ ತೆರಳುತ್ತಿದ್ದ ಸರಕಾರಿ ಸಾರಿಗೆ ಬಸ್ಸು ಮಧ್ಯೆ ಈ ಅವಘಡ ಸಂಭವಿಸಿದೆ. ಪರಿಣಾಮ ಕಡಬ ತಾಲೂಕಿನ ಕೇಪು ಬಾಳಪ್ಪ ಗೌಡರ ಪುತ್ರ ದಯೇಶ್ ಗೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.