Thursday, May 2, 2024
ಸುದ್ದಿ

Breaking News : ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಆಗಮಿಸಿದ್ದ ಬದಿಯಡ್ಕ ನೀರ್ಚಾಲು ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ಖಚಿತ ; ಕೇರಳ ಸಿಎಂ ಸುದ್ದಿ ಗೋಷ್ಠಿ – ಕಹಳೆ ನ್ಯೂಸ್

ಮಂಗಳೂರು: ಮಾ 17: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಾಸರಗೋಡಿಗೆ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 24 ಕ್ಕೆ ಏರಿಕೆಯಾಗಿದೆ. ಈ ವಿಷಯವನ್ನು ನಿನ್ನೆ ಸಂಜೆ ಕೇರಳ ಸಿಎಂ ಪಿಣಾರಾಯಿ ವಿಜಯನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು

ಮಾ. 14 ರಂದು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಈ ವ್ಯಕ್ತಿ ಆಗಮಿಸಿದ್ದರು. ಇವರು ಕೇರಳದ ಕಾಸರಗೋಡಿವಿನ ಬದಿಯಡ್ಕ ನೀರ್ಚಾಲು ಮೂಲದ ವ್ಯಕ್ತಿ. ಇದೀಗ ಈ ವಿಮಾನದಲ್ಲಿ ಪ್ರಯಾಣಿಸಿರುವ ಇತರ ಪ್ರಯಾಣಿಕರಿಗೆ ಕೂಡ ಕೊರೊನಾ ಸೋಂಕು ಹರಡಿರುವ ಸಾಧ್ಯತೆ ಬಗ್ಗೆ ಅನುಮಾನಗಳು ವ್ಯಕ್ತವಾಗುತಿದ್ದು , ಇದು ಆತಂಕಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಸೋಂಕಿತ ವ್ಯಕ್ತಿ ಪ್ರಯಾಣಿಸಿದ ವಿಮಾನದಲ್ಲಿದ್ದ ಪ್ರಯಾಣಿಕರು ಈಗಾಗಲೇ ತಮ್ಮ ತಮ್ಮ ಮನೆಗಳನ್ನು ಸೇರಿದ್ದು ಅದರಲ್ಲಿ ಯಾರಿಗಾದರೂ ವೈರಸ್ ಹರಡಿದ್ದರೇ ಅವರನ್ನು ಪತ್ತೆ ಹಚ್ಚಿ ಪ್ರತ್ಯೇಕಿಸುವುದು ತೀರಾ ಕಷ್ಟದ ಕೆಲಸವಾಗಿದೆ .ಅಲ್ಲದೇ ಈ ವಿಮಾನದಲ್ಲಿ ಪ್ರಯಾಣಿಸಿದ ಬಹುತೇಕರು ದಕ ಜಿಲ್ಲೆಯವರಾಗಿರುವುದು ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಲು ಕಾರಣವಾಗಿದೆ.

ಜಾಹೀರಾತು
ಜಾಹೀರಾತು

ಇದೀಗ ಈ ವಿಮಾನದಲ್ಲಿ ಪ್ರಯಾಣಿಸಿದವರನ್ನು ಪತ್ತೆ ಹಚ್ಚಿ ಅವರನ್ನು ಪ್ರತ್ಯೇಕಿಸುವ ಕಾರ್ಯಕ್ಕೆ ಜಿಲ್ಲಾಡಳಿತ ಹಾಗೂ ಅರೋಗ್ಯ ಇಲಾಖೆ ಮುಂದಾಗಿದೆ ಎಂದು ತಿಳಿದು ಬಂದಿದೆ. ಬಳಿಕ ಅವರಲ್ಲಿ ರೋಗ ಲಕ್ಷಣಗಳು ಕಂಡು ಬಂದವರ ತಪಾಸಣೆ ನಡೆಸಿ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸುವ ಬಗ್ಗೆ ಸರಕಾರ ಚಿಂತಿಸಿದೆ .

ಜಾಹೀರಾತು
ಜಾಹೀರಾತು

ನಿನ್ನೆ ಸಂಜೆ ಕೇರಳ ಸಿ ಎಂ ಕಾಸರಗೋಡಿನ ವ್ಯಕ್ತಿಗೆ ಸೋಂಕು ತಗಲಿರುವ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ 18ಗಂಟೆಯ ಬಳಿಕವೂ ಜಿಲ್ಲಾಡಳಿತದ ಬಳಿ ವಿಮಾನದಲ್ಲಿ ಪ್ರಯಾಣಿಸಿದವರ ಸಂಪೂರ್ಣ ಮಾಹಿತಿ ಇಲ್ಲ ಎನ್ನಲಾಗುತ್ತಿದೆ. ಮಾಹಿತಿ ಸಂಗ್ರಹಿಸಿ ಅವರನ್ನು ಪ್ರತ್ಯೇಕಿಸುವ ಕಾರ್ಯವನ್ನು ಇಂದು ಬೆಳಿಗ್ಗೆಯಿಂದ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ