Saturday, March 14, 2026
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲಕ ವ್ಯಕ್ತಿಗೆ ಕೊರೊನಾ ಸೋಂಕು ದೃಢ : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 106ಗೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು : ಮಾರ್ಚ್ 20ರಂದು ದುಬೈನಿಂದ ಮಂಗಳೂರಿನ ಪುತ್ತೂರಿಗೆ ಆಗಮಿಸಿದ್ದಂತ ಮತ್ತೋರ್ವ ವ್ಯಕ್ತಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢವಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಪೀಡಿತ ಸಂಖ್ಯೆ 106ಗೆ ಏರಿಕೆಯಾಗಿದೆ.

ಇಂದು ಮಧ್ಯಾಹ್ನ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದಂತ ಕೊರೊನಾ ಸಂಬಂಧಿಸಿದಂತ ಹೆಲ್ತ್ ಬುಲೆಟಿನ್ ನಲ್ಲಿ, ನಾಲ್ಕು ಕೊರೊನಾ ವೈರಸ್ ಸೋಂಕು ಪ್ರಕರಣಗಳು ರಾಜ್ಯದಲ್ಲಿ ಇಂದು ದೃಢಪಟ್ಟಿದ್ದನ್ನು ತಿಳಿಸಿತ್ತು. ಬೆಂಗಳೂರಿನ ಇಬ್ಬರಿಗೆ, ಮೈಸೂರಿನ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ವರದಿ ಮಾಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಳಿಕ ಇದೀಗ ದಕ್ಷಿಣ ಕನ್ನಡದ ಪುತ್ತೂರು ಮೂಲದ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ. ಮಾರ್ಚ್ 20ರಂದು ಪುತ್ತೂರು ಮೂಲದ ವ್ಯಕ್ತಿ ಮಂಗಳೂರಿಗೆ ಆಗಮಿಸಿದ್ದರು. ಇಂತಹ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ತಿಳಿದು ಬಂದಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 106ಗೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು