Monday, March 16, 2026
ರಾಜಕೀಯ

‘ನಿಖಿಲ್‌ ಕುಮಾರಸ್ವಾಮಿ ವಿವಾಹ ಸಮಾರಂಭದಲ್ಲಿ ನಿಯಮ ಉಲ್ಲಂಘಿಸಿಲ್ಲ’ ; ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು, ಎ.18  : ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಅವರು ನಿಯಮ ಉಲ್ಲಂಘಿಸಿಲ್ಲ. ಎಲ್ಲಾ ಅನುಮತಿ ನೀಡಲಾಗಿತ್ತು ಎಂದು ಸಿಎಂ ಬಿಎಸ್‌ವೈ ಅವರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಎಸ್‌ವೈ ಅವರು, ಸರಳವಾಗಿ ಅವರು ವಿವಾಹ ಕಾರ್ಯಕ್ರಮ ಮಾಡಿದ್ದಾರೆ. ಅವರು ನಿಯಮ ಉಲ್ಲಂಘಿಸಿಲ್ಲ. ಈ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಬಂಧು-ಬಳಗ ದೊಡ್ಡ ಪ್ರಮಾಣದಲ್ಲಿದ್ದರೂ ಇತಿಮಿತಿಗಳಲ್ಲಿ ವಿವಾಹ ಕಾರ್ಯಕ್ರಮವನ್ನು ಮಾಡಿದ್ದಾರೆ ಎಂದರು.

ಜಾಹೀರಾತು
ಜಾಹೀರಾತು

ಕುಮಾರಸ್ವಾಮಿ ಅವರು ಶುಕ್ರವಾರ ಟ್ವೀಟ್‌ ಮಾಡಿದ್ದು, ನನ್ನ ಪುತ್ರನ ವಿವಾಹವು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕಾರ ನೀಡಿದ ಲಕ್ಷಾಂತರ ಕಾರ್ಯಕರ್ತರು ಹಾಗೂ ಕುಟುಂಬದ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸಿದ್ದರು. ನನ್ನ ಕುಟುಂಬದ ಕುಡಿಯ ವಿವಾಹಕ್ಕೆ ಶಾಸಕರು, ಕಾರ್ಯಕರ್ತರು, ಮುಖಂಡರು, ಕುಟುಂಬದ ಹಿತೈಷಿಗಳು ಸೇರಿದಂತೆ ನಾಡಿನ ಲಕ್ಷಾಂತರ ಜನರು ಮನೆಯಿಂದಲೇ ಹರಸಿದ್ದೀರಿ. ಇದಕ್ಕೆ ನಾನು ಹಾಗೂ ನನ್ನ ಕುಟುಂಬದವರು ಮಾಡಿದ ಮನವಿಗೆ ನೀವು ಸ್ಪಂದಿಸಿದ ರೀತಿ ಅನಕರಣೀಯ ಹಾಗೂ ಮಾದರಿಯಾಗಿದೆ ಎಂದು ತಿಳಿಸಿದ್ದರು.