ಕರ್ನಾಟಕ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ಕೋ-ಆರ್ಡಿನೇಷನ್ ಸಮಿತಿಗೆ ದ.ಕ. ಜಿಲ್ಲೆಯಿಂದ ಲಾವಣ್ಯಾ ಬಲ್ಲಾಳ್ ಮತ್ತು ಶೇರಿಲ್ ಅಯೋನ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ಕೋ ಆರ್ಡಿನೇಷನ್ ಸಮಿತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರು ನಿಯೋಜಿತರಾಗಿದ್ದಾರೆ.
ಸಮಿತಿಗೆ ಹೆಚ್ಚುವರಿಯಾಗಿ ಒಂಬತ್ತು ಸದಸ್ಯರನ್ನು ಆಯ್ಕೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಇದರಲ್ಲಿ ದ.ಕ. ಜಿಲ್ಲೆಯಿಂದ ಲಾವಣ್ಯಾ ಬಲ್ಲಾಳ್ ಮತ್ತು ಶೇರಿಲ್ ಅಯೋನ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಲಾವಣ್ಯ ಬಲ್ಲಾಳ್ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದು, ಹಲವಾರು ವರ್ಷಗಳಿಂದ ಮಹಿಳಾ ಕಾಂಗ್ರೆಸ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವವಿಯಾಗಿದ್ದಾರೆ.
ಶೆರಿಲ್ ಅಯೋನ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದು, ರಾಜ್ಯಮಟ್ಟದ ಮಹಿಳಾ ಕಾಂಗ್ರೆಸ್ಸಿನ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾಗಿಯು ಕರ್ತವ್ಯ ನಿರ್ವಹಿಸಿದ ಅನುಭವಿಯಾಗಿದ್ದಾರೆ.









