Thursday, May 14, 2026
ಸುದ್ದಿ

ದೇಶದಲ್ಲಿ ಮೇ 31ರವರೆಗೂ ಲಾಕ್​ಡೌನ್​; ಗೃಹ ಸಚಿವಾಲಯದಿಂದ ಅಧಿಕೃತ ಆದೇಶ – ಕಹಳೆ ನ್ಯೂಸ್

ನವದೆಹಲಿ: ಲಾಕ್​ಡೌನ್​ 4.0 ಹೊಸ ನಿಯಮಗಳೊಂದಿಗೆ ಜಾರಿಯಾಗಲಿದೆ. ಹಲವು ಸಡಿಲಿಕೆಗಳಾಗಲಿವೆ, ಸಾರ್ವಜನಿಕ ಸಾರಿಗೆಗಳಿಗೆ ಅವಕಾಶ ಸಿಗಲಿದೆ, ರೆಸ್ಟೋರೆಂಟ್​, ಶಾಪಿಂಗ್​ ಮಾಲ್​ಗಳು ಮತ್ತೆ ತೆರೆಯಲಿವೆ ಎಂಬಿತ್ಯಾದಿ ಚರ್ಚೆ, ಆಶಯಗಳ ಮಧ್ಯೆ ಕೇಂದ್ರ ಗೃಹ ಸಚಿವಾಲಯ ಇಂದು ಹೊಸ ಆದೇಶವನ್ನು ಪ್ರಕಟಿಸಿದೆ.

ಸದ್ಯ ಇರುವ ಲಾಕ್​ಡೌನ್​ ಅವಧಿಯನ್ನು ಇನ್ನೂ ಎರಡುವಾರಗಳ ಕಾಲ ಅಂದರೆ ಮೇ 31ರವರೆಗೆ ವಿಸ್ತರಣೆ ಮಾಡಿ ಆದೇಶ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉನ್ನತ ವಿಪತ್ತು ನಿರ್ವಹಣಾ ಸಂಸ್ಥೆಯಾಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ಸಚಿವಾಲಯಕ್ಕೆ ನೀಡಿದ ಶಿಫಾರಸುಗಳ ಅನ್ವಯ ಈ ಆದೇಶ ಪ್ರಕಟವಾಗಿದೆ. ದೇಶದಲ್ಲಿ ಕೊವಿಡ್​-19 ತಡೆಗಟ್ಟಲು ಇನ್ನೂ ಹೆಚ್ಚಿನ ನಿಯಂತ್ರಣಾ ಕ್ರಮಗಳು ಅಗತ್ಯ ಇರುವ ಕಾರಣ ಲಾಕ್​ಡೌನ್​ ಅವಧಿ ವಿಸ್ತರಣೆ ಮಾಡಲಾಗಿದ್ದು, ಎಲ್ಲ ರಾಜ್ಯಸರ್ಕಾರಗಳಿಗೂ ಸೂಚನೆ ನೀಡಲಾಗಿದೆ. (ಏಜೆನ್ಸೀಸ್)