Breaking News : ಭಾರತದಲ್ಲಿ ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆ ; 24 ಗಂಟೆಯಲ್ಲಿ 5,242 ಹೊಸ ಪ್ರಕರಣ ಪತ್ತೆ – 24 ಗಂಟೆಯಲ್ಲಿ 157 ಮಂದಿ ಬಲಿ – ಕಹಳೆ ನ್ಯೂಸ್

– 36,824 ಮಂದಿ ಸೋಂಕಿನಿಂದ ಗುಣಮುಖ
– 24 ಗಂಟೆಯಲ್ಲಿ 157 ಮಂದಿ ಬಲಿ
ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 96,169ಕ್ಕೆ ಏರಿಕೆಯಾಗಿದೆ. 3,029 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. 24 ಗಂಟೆಯಲ್ಲಿ 5,242 ಹೊಸ ಪ್ರಕರಣಗಳು ಹಾಗೂ 157 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಗುಜರಾತ್‍ನಲ್ಲಿ 11,380 ಮಂದಿ ಸೋಂಕಿಗೆ ತುತ್ತಾಗಿದ್ದು, 659 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 11,224 ಮಂದಿಗೆ ಕೊರೊನಾ ತಗುಲಿದ್ದು, 79 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 9,755 ಮಂದಿ ಕೊರೊನಾಗೆ ತುತ್ತಾಗಿದ್ದು, 148 ಮಂದಿ ಮೃತಪಟ್ಟಿದ್ದಾರೆ. ಸುಮಾರು 4,202 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.

ಆಂಧ್ರಪ್ರದೇಶದಲ್ಲಿ 2,380 ಮಂದಿಗೆ ಸೋಂಕು ತಗುಲಿದ್ದು, 50 ಮಂದಿ ಸಾವನ್ನಪ್ಪಿದ್ದಾರೆ. 1,456 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,551 ಮಂದಿ ಕೊರೊನಾಗೆ ತುತ್ತಾಗಿದ್ದು, 34 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 602 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 497 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ 1,147 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 37ಕ್ಕೆ ಏರಿದೆ. ಒಟ್ಟು 501 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.









