Wednesday, June 10, 2026
ಸುದ್ದಿ

Breaking News : ಜೂನ್ 25ರಿಂದ ಜುಲೈ 4 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ – ಜೂನ್ 18ರಂದು ಪಿಯುಸಿ ಇಂಗ್ಲೀಷ್ ಪರೀಕ್ಷೆ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ.

ಜಾಹೀರಾತು

ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಿದೆ. ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.