Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ; ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಇಬ್ಬರಿಗೆ ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ವರದಿಯಾಗಿದೆ. 30 ವರ್ಷದ ಗಂಡಸು ಮತ್ತು 55 ವರ್ಷದ ಹೆಂಗಸಿಗೆ ಕೊರೋನಾ ದೃಢಪಟ್ಟಿದೆ.
ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ 30 ವರ್ಷದ ಗಂಡಸು, ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದ ವ್ಯಕ್ತಿಯಾಗಿದ್ದು, 55 ವರ್ಷದ ಮಹಿಳೆಗೆ SARI ಪ್ರಕರಣದಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.











