Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಕೊರೊನಾ ಪಾಸಿಟಿವ್ – ಉಡುಪಿಯಲ್ಲಿ 6 ಮಂದಿಗೆ ಸೋಂಕು ದೃಢ ; ರಾಜ್ಯದಲ್ಲಿ 63 ಮಂದಿಗೆ ಸೋಂಕು – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಬಿದ್ದಿಲ್ಲ. ಇಂದೂ ಕೂಡ ರಾಜ್ಯದಲ್ಲಿ ಬರೋಬ್ಬರಿ 63 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದ ಹಾಸನ ಜಿಲ್ಲೆಗೆ ಕೊರೊನಾ ಬಿಗ್ ಶಾಕ್ ಕೊಟ್ಟಿದೆ. ಇಂದು ಒಂದೇ ದಿನ ಹಾಸನ ಜಿಲ್ಲೆಯಲ್ಲಿ 21 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಮಲೆನಾಡಿನ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಬೀದರ್ ಜಿಲ್ಲೆಯಲ್ಲಿ 10, ಮಂಡ್ಯದಲ್ಲಿ 8, ಕಲಬುರಗಿ 7, ಉಡುಪಿ 6, ಬೆಂಗಳೂರು 4, ತುಮಕೂರು 4, ದಕ್ಷಿಣಕನ್ನಡ 1, ಯಾದಗಿರಿ 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಉಡುಪಿ ಹಾಗೂ ದಕ್ಬನಿಂದ ರಾಜ್ಯಕ್ಕೆ ಆಗಮಿಸಿದ್ದ ಪ್ರಯಾಣಿಕರಲ್ಲೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.









