
ಬೆಂಗಳೂರು, ಮೇ 20 : ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್‌ಗಳ ಅಗತ್ಯವಿಲ್ಲ ಎಂದು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರವೀಣ್ ಸೂದ್ ಅವರು ಮೇ 20 ರ ಬುಧವಾರ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಇನ್ನು ಮುಂದೆ ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್‌ನ ಅಗತ್ಯವಿಲ್ಲ. ತೀರಾ ಅಗತ್ಯವಾದ್ದಲ್ಲಿ ಮಾತ್ರ ಅಂತರ್ ಜಿಲ್ಲಾ ಪ್ರಯಾಣ ಮಾಡಿ. ಆದರೆ ಸಂಜೆ 7 ರಿಂದ ಬೆಳಿಗ್ಗೆ 7 ರವರೆಗೆ ಲಾಕ್‌ಡೌನ್ ನಿಯಮಗಳು ಜಾರಿಯಲ್ಲಿವೆ ಎಂಬುದನ್ನು ಎಲ್ಲರೂ ನೆನಪಿನಲ್ಲಿಡಿ ಎಂದು ಹೇಳಿದ್ದಾರೆ.
Pass is not required for inter district movement now. However keep your travel to bare essential. And don’t forget lockdown between 7 pm and 7 am.
— DGP KARNATAKA (@DgpKarnataka) May 20, 2020
ಪ್ರಸ್ತುತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು ಕರ್ನಾಟಕ ಸರ್ಕಾರವು ಕೆಲವೊಂದು ಸಡಿಲಿಕೆ ಮಾಡಿದ್ದು ಹಗಲಿನಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಿದೆ.









