Wednesday, June 10, 2026
ಸುದ್ದಿ

ಸಂಕಷ್ಟಕ್ಕೆ ಸಿಲುಕಿಹಾಕಿಕೊಂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಇತರ ಜಿಲ್ಲೆಗಳ ಜನರ ರಕ್ಷಣೆಗೆ ಮುಖ್ಯಮಂತ್ರಿಗಳಿಗೆ ಶಾಸಕ ಹರೀಶ್ ಪೂಂಜ ಮನವಿ – ಕಹಳೆ ನ್ಯೂಸ್

ಬೆಂಗಳೂರು : ನಿಪ್ಪಾಣಿಯಲ್ಲಿ ಸಿಲುಕಿಹಾಕಿಕೊಂಡ ದಕ್ಷಿಣ ಕನ್ನಡ, ಉಡುಪಿ ಹಾಗೂ ಇತರ ಜಿಲ್ಲೆಗಳ ಗರ್ಭಿಣಿ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಹಲವಾರು ಮಂದಿಯನ್ನು ಮರಳಿ ಕರೆತರಲು ಮುಖ್ಯಮಂತ್ರಿಗಳಿಗೆ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದರು.

ಜಾಹೀರಾತು

ಯಾರೋ ಮಾಡಿದ ತಪ್ಪಿಗೆ ಬಲಿಯಾಗಿ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಇತರ ಜಿಲ್ಲೆಗಳ ಗರ್ಭಿಣಿ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಹಲವಾರು ಮಂದಿ ಕರ್ನಾಟಕ-ಮಹಾರಾಷ್ಟ್ರ ಗಡಿಭಾಗ ನಿಪ್ಪಾಣಿಯಲ್ಲಿ ಸಿಲುಕಿಹಾಕಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತಾಗಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿ, ಅಲ್ಲಿರುವ ಜನರ ಸಮಸ್ಯೆಗಳ ಕುರಿತಾಗಿ ಮನವರಿಕೆ ಮಾಡಿಕೊಡಲಾಯಿತು. ಅವರ ಕ್ಷೇಮ ಕಾಪಾಡಲು ಸಿಲುಕಿಹಾಕಿಕೊಂಡಿರುವ ಬಂಧುಗಳನ್ನು ಕರ್ನಾಟಕಕ್ಕೆ ಬರಲು ಅನುಮತಿ ನೀಡಬೇಕೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿನಂತಿ ಮಾಡಿದ್ದಾರೆ.