Recent Posts

Monday, June 8, 2026
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಂಜೆ 7ರಿಂದ ಬೆಳಗ್ಗೆ 7ರವರೆಗೆ ಚಾರ್ಮಾಡಿ ಘಾಟ್ ಬಂದ್! – ಕಹಳೆ ನ್ಯೂಸ್

ಬೆಳ್ತಂಗಡಿ: ಚಿಕ್ಕಮಗಳೂರು-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿಯುವ ಭೀತಿ ಎದುರಾಗಿದ್ದು ಇದನ್ನು ತಪ್ಪಿಸಲು ಘಾಟ್ ನಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ತಿಳಿಸಿದ್ದಾರೆ.

ಜಾಹೀರಾತು

ಕಳೆದ ವರ್ಷದ ಮಳೆಗಾಲದಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದು ರಸ್ತೆಯೇ ಮಾಯವಾಗಿತ್ತು. ಕಳೆದೊಂದು ವಾರದಿಂದ ಚಿಕ್ಕಮಗಳೂರು, ಕೊಟ್ಟಿಗೆಹಾರ, ಮೂಡಿಗೆರೆ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಮಣ್ಣು ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ ರಾತ್ರಿ ವಾಹನ ಸಂಚಾರ ನಿಷೇಧಿಸಿ ಆದೇಶ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು