Recent Posts

Saturday, September 12, 2026
ಉಡುಪಿಸುದ್ದಿ

ಉಡುಪಿ ಕೋರ್ಟ್‌ನ ನ್ಯಾಯಾಧೀಶರಿಗೆ ಕೊರೊನಾ ಪಾಸಿಟಿವ್‌ ; 2 ದಿನ ನ್ಯಾಯಾಲಯ ಸೀಲ್‌ಡೌನ್ – ಕಹಳೆ ನ್ಯೂಸ್

ಉಡುಪಿ, ಜು. 21  : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು ಮಂಗಳವಾರ ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ವರದಿ ಪಾಸಿಟಿವ್‌ ಆಗಿದೆ.

ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನ್ಯಾಯಾಧೀಶರಿಗೆ ಕೊರೊನಾ ಇರುವುದು ದೃಢಪಟ್ಟ ಕಾರಣ ಕೋರ್ಟ್ ಆವರಣವನ್ನು ಎರಡು ದಿನ ಸೀಲ್‌ಡೌನ್‌ ಮಾಡಿ ಸ್ಯಾನಿಟೈಸ್ ಮಾಡಲಿದ್ದು ಈ ನಿಟ್ಟಿನಲ್ಲಿ ಜು. 21 ಮತ್ತು 22ರಂದು ಕೋರ್ಟ್ ಸೀಲ್‌ಡೌನ್‌ ಆಗಿರಲಿದೆ ಎಂದು ತಿಳಿದು ಬಂದಿದೆ.

ಇನ್ನು ಉಡುಪಿಯಲ್ಲಿ ಸೋಮವಾರ 98 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2321ಕ್ಕೆ ಏರಿಕೆಯಾಗಿದೆ.