Tuesday, May 21, 2024
ಗೋಕರ್ಣಶಿಕ್ಷಣಸುದ್ದಿ

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮೂಲಕ ಭಾರತೀಯ ಶಿಕ್ಷಣಕ್ಕೆ ಹೊಸದಿಕ್ಕು ; ಗುರುಕುಲಗಳ ಆನ್‍ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದ ರಾಘವೇಶ್ವರಭಾರತೀ ಮಹಾಸ್ವಾಮೀಜಿ – ಕಹಳೆ ನ್ಯೂಸ್

ಗೋಕರ್ಣ: ದೇಶ ಬೆಳಗಬೇಕು; ಭಾರತೀಯ ವಿದ್ಯೆ ಬೆಳೆಯಬೇಕು ಎಂಬ ಉದ್ದೇಶದಿಂದ ಭಾರತದ ಶಿಕ್ಷಣದಲ್ಲಿ ಭಾರತೀಯತೆಯನ್ನು ತುಂಬುವ ಮಹತ್ಕಾರ್ಯಕ್ಕೆ ಶ್ರೀರಾಮಚಂದ್ರಾಪುರ ಮಠದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮುನ್ನುಡಿ ಬರೆದಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳ ಆನ್‍ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದ ಸಂದರ್ಭ ಸ್ವಾಮೀಜಿಯವರು ಸ್ವತಃ ಪ್ರಥಮ ಪಾಠ ಬೋಧಿಸಿದರು. ವಿಶ್ವದ ಎಲ್ಲೂ ಸಿಗದ ಪರಿಪೂರ್ಣ, ಅಪೂರ್ವ ಶಿಕ್ಷಣ ನಮ್ಮ ಯುವ ಜನಾಂಗಕ್ಕೆ ಸಿಗಬೇಕು ಎನ್ನುವುದೇ ವಿವಿವಿ ಸ್ಥಾಪನೆಯ ಉದ್ದೇಶ ಎಂದು ಹೇಳಿದರು.

ಜಾಹೀರಾತು
ಜಾಹೀರಾತು

ಚಾಣಕ್ಯ ಇಡೀ ಗುರುಕುಲಕ್ಕೆ ಸ್ಫೂರ್ತಿ. ಆದ್ದರಿಂದ ಅವರ ಹೆಸರಲ್ಲಿ ವಿಶ್ವವಿದ್ಯಾಪೀಠ ಸ್ಥಾಪನೆಯಾಗುತ್ತಿದೆ. ಭಾರತಕ್ಕೆ ತಿರುವು ಕೊಡಬಲ್ಲ ಗುರುಕುಲಗಳ ಶುಭಾರಂಭ ಈ ಮಹತ್ವಾರ್ಯಕ್ಕೆ ಪೀಠಿಕೆ ಮಾತ್ರ ಎಂದು ಬಣ್ಣಿಸಿದರು.

ಜಾಹೀರಾತು