Saturday, March 7, 2026
ರಾಜ್ಯಸುದ್ದಿ

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ; ಒಂದೇ ದಿನ ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಸೋಂಕು ಪತ್ತೆ – ಬರೋಬ್ಬರಿ 97 ಮಂದಿ ಬಲಿ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 97 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1616ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 47 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 97 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2207 ಹೊಸ ಪ್ರಕರಣಗಳು ವರದಿಯಾಗಿದ್ದು,
ರಾಜ್ಯದಲ್ಲಿ ಒಟ್ಟು 5030 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 80,863ಕ್ಕೇರಿಕೆಯಾಗಿದೆ ಎಂದು ಸಚಿವ ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು

ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ಕಳೆದ 24 ಗಂಟೆಗಳಲ್ಲಿ 2071 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್ ಆಗಿದ್ದಾರೆ ಎಂದು ಸುಧಾಕರ್ ತಿಳಿಸಿದ್ದಾರೆ.