Recent Posts

Sunday, September 13, 2026
ದಕ್ಷಿಣ ಕನ್ನಡರಾಜ್ಯಸುದ್ದಿ

ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು- ರಾಜ್ಯದಲ್ಲಿ 5,503 ಹೊಸ ಕೊರೊನಾ ಪ್ರಕರಣ ಪತ್ತೆ- ಕಹಳೆ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಮತ್ತೆ 208 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5311ಕ್ಕೆ ಏರಿಕೆಯಾಗಿದೆ.ಸದ್ಯ ಜಿಲ್ಲೆಯಲ್ಲಿ 2715 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2556 ಮಂದಿ ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಬುಧವಾರವೂ ಕೂಡ 118 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂದಿದ್ದಾರೆ.

ಜಾಹೀರಾತು

65 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 12 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದ್ದು, 58 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಬುಧವಾರ 5,503 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 1,12,504ಕ್ಕೆ ಏರಿಕೆಯಾಗಿದೆ.