Monday, March 9, 2026
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕಾಸರಗೋಡು – ದ.ಕ. ಜಿಲ್ಲೆ ಗಡಿ ತೆರವಿಗೆ ದ.ಕ. ಜಿಲ್ಲಾಡಳಿತದ ಅಭ್ಯಂತರವಿಲ್ಲ ; ಕಾಸರಗೋಡು ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ಆ. 03: ಅಂತರ ರಾಜ್ಯ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರತಿಕ್ರಿಯೆ ನೀಡಿದ್ದು, ಸರಕಾರ ಆದೇಶ ನೀಡಿದ್ದಲ್ಲಿ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆಗಸ್ಟ್ 5ರಿಂದ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ, ಕರ್ನಾಟಕ ಹಾಗೂ ಕೇರಳ ಸರಕಾರದ ಆದೇಶದಂತೆ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು. ಕಾಸರಗೋಡಿನಿಂದ ಹೆಚ್ಚಿನ ನಿರ್ಬಂಧಗಳಿವೆ. ಈ ಹಿನ್ನೆಲೆ ಕಾಸರಗೋಡು ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು.

ಜಾಹೀರಾತು
ಜಾಹೀರಾತು

ಸದ್ಯ ತಲಪಾಡಿ ಭಾಗಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕ ಮಾಡಲಾಗಿದೆ. ಶಿಘ್ರದಲ್ಲೇ ಕಾಸರಗೋಡು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಸರಕಾರದ ಆದೇಶದಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ದ.ಕ. ಡಿಸಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯೆ ನೀಡಿದ್ದಾರೆ.