Recent Posts

Saturday, April 25, 2026
ಕಾಸರಗೋಡುಸುದ್ದಿ

ಕೇರಳದ ಮುನ್ನಾರ್ ನಲ್ಲಿ ಭೂಕುಸಿತ ; 5 ಸಾವು, ನೂರಕ್ಕೂ ಅಧಿಕ ಮಂದಿ ನಾಪತ್ತೆ – ಕಹಳೆ ನ್ಯೂಸ್

ತಿರುವನಂತಪುರ, ಆ. 07: ದೇಶದ ಹಲವು ರಾಜ್ಯಗಳಲ್ಲಿ ಭೀಕರ ರೀತಿಯ ಮಳೆಯಾಗುತ್ತಿದ್ದು, ಅನೇಕ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದೆ. ಇದೀಗ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕೇರಳದ ಮುನ್ನಾರ್ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿದೆ.

ಕೇರಳ ರಾಜ್ಯದ ಮುನ್ನಾರ್ ನ ರಾಜನಲಾ ಪ್ರದೇಶದಲ್ಲಿ ಭೂ ಕುಸಿತ ಉಂಟಾಗಿ ಐವರು ಮೃತಪಟ್ಟು ಅವಶೇಷಗಳಡಿಯಲ್ಲಿ ನೂರಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿಲಿದ್ದು ಸುಮಾರು ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.

 

 

ಇದುವರೆಗೆ 5 ಶವಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರನ್ನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.

ಭೂಕುಸಿತ ಉಂಟಾದ ಪ್ರದೇಶ ಸಂಪೂರ್ಣ ಸಂಪರ್ಕವನ್ನು ಕಳೆದುಕೊಂಡಿದ್ದು, ಕೆಲವು ರಸ್ತೆ ಕೊಚ್ಚಿ ಹೋಗಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಕಂದಾಯ ಸಚಿವ ಚಂದ್ರಶೇಖರನ್ ತಿಳಿಸಿದ್ದಾರೆ.