Recent Posts

Sunday, September 13, 2026
ಬೆಂಗಳೂರುರಾಜ್ಯ

ಪೈಗಂಬರ್ ನಿಂದನೆ ಹೆಸರಿನಲ್ಲಿ ಬೆಂಗಳೂರಿನಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ; ಪೊಲೀಸರ ಮೇಲೆ ಕಲ್ಲುತೂರಾಟ – ಅಕ್ಕ ಪಕ್ಕದ ಮಗೆಗಳಿಗೆ ನುಗ್ಗಿ 100ಕ್ಕೂ ಅಧಿಕ ಮುಸ್ಲಿಂ ಯುವಕರ ರೌಡಿಸಂ ‘ ಬೆಂಗಳೂರಿನಲ್ಲಿ ‌ಕೋಮು ‌- ಗಲಭೆ ಸೃಷ್ಠಿಸಲು ಯತ್ನ ‘ – ಕಹಳೆ ನ್ಯೂಸ್

ಬೆಂಗಳೂರು: ಪುಲಿಕೇಶಿ ನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮತ್ತು ಕಚೇರಿ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದೆ.

ಜಾಹೀರಾತು

ಶಾಸಕರ ಆಪ್ತ ನವೀನ್ ಎಂಬವರು ಫೇಸ್ ಬುಕ್ ನಲ್ಲಿ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಗುಂಪೊಂದು ದಿಢೀರ್‌ ಆಗಿ ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು ಕಚೇರಿಯನ್ನು ಒಡೆದು ಹಾಕಲು ಯತ್ನಿಸಿದ್ದಾರೆ. ಈ ವೇಳೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಮೊಬೈಲ್‌ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.

ಘಟನೆಯಲ್ಲಿ ಶಾಸಕರ ಮನೆ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದ್ದು, ಆಫೀಸ್ ಬಳಿ ನಿಂತಿದ್ದ ಕಾರುಗಳ ಜಖಂಗೊಂಡಿದೆ. ಪೊಲೀಸರು ಅಕ್ಕಪಕ್ಕದ ಎಲ್ಲಾ ರಸ್ತೆ ಗಳನ್ನು ಮುಚ್ಚಿದ್ದಾರೆ. ಪೊಲೀಸರ ಮೇಲೆ ಯುವಕರ ಗುಂಪು ದಾಳಿ ಮಾಡಿದೆ.

ಘಟನೆಯನ್ನು ವರದಿ ಮಾಡಿರುವ ರಾಜ್ಯದ ಮಾಧ್ಯಮಗಳು ಮುಸ್ಲಿಂ ಯುವಕರು ರೌಡಿಸಂ ತೋರಿತುತ್ತಿದ್ದಾರೆ ಎಂದು ವರದಿ ಮಾಡಿದೆ.