Recent Posts

Sunday, September 13, 2026
ರಾಷ್ಟ್ರೀಯ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 75,760 ಹೊಸ ಕೇಸು, 33 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ -ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 75 ಸಾವಿರದ 760 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 33 ಲಕ್ಷ ಗಡಿ ದಾಟಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಿನ್ನೆ ಒಂದೇ ದಿನ 75,760 ಹೊಸ ಕೇಸ್ ಜೊತೆಗೆ ಪ್ರಸ್ತುತ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 33,10,235ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಸೋಂಕಿಗೆ ಸಾವಿರದ 1,023 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದು, ಇದುವರೆಗೆ ದೇಶದಲ್ಲಿ ಕೊರೋನಾಗೆ ಮೃತಪಟ್ಟವರ ಸಂಖ್ಯೆ 60,472ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ 33,10,235 ಮಂದಿ ಸೋಂಕಿತರ ಪೈಕಿ 25,23,772 ಮಂದಿ ಗುಣಮುಖರಾಗಿದ್ದು, ದೇಶದಲ್ಲಿ ಇನ್ನೂ 7,25,991 ಸಕ್ರಿಯ ಕೇಸುಗಳಿವೆ ಎಂದು ಸಚಿವಾಲಯದ ಮಾಹಿತಿ ತಿಳಿಸಿದೆ.