
ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ನ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ದಸರಾ ಹಿನ್ನೆಲೆಯಲ್ಲಿ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಕಟೀಲ್ ಅವರು ಜನಾರ್ಧನಪೂಜಾರಿ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದಿದ್ದಾರೆ.
ಇದಕ್ಕೂ ಮುನ್ನ ನಳಿನ್ ಕುಮಾರ್ ಕಟೀಲ್ ಅವರು ಶ್ರೀಗೋಕರ್ಣನಾಥ್, ಪರಿವಾರ ದೇವರು ಹಾಗೂ ಶಾರದಾ ಮಾತೆ, ನವದುರ್ಗೆಯರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.














