Friday, April 24, 2026
ಸುದ್ದಿ

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣ : ಪೊಲೀಸರಿಂದ ಓರ್ವ ಆರೋಪಿ ಅರೆಸ್ಟ್- ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಕೆಲ ದಿನಗಳ ಹಿಂದೆ ಗೋಡೆಗಳ ಮೇಲೆ ಉಗ್ರರ ಪರ ಬರಹಗಳನ್ನು ಬರೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಬಂಧಿತ ವ್ಯಕ್ತಿಯನ್ನು ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್‌ಅಗಾ ಎಂದು ತಿಳಿದುಬಂದಿದೆ. ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು